ಇಂದು ನಗರದ ಸಾಗರ ರಸ್ತೆಯಲ್ಲಿರುವ ಪೆಸಿಟ್ ಕಾಲೇಜಿನಲ್ಲಿ ಕೊರೊನಾ ಸಂದರ್ಭದಲ್ಲಿ ಕೆಲಸ ಮಾಡಿರುವಂತಹ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ನರ್ಸ್ ಗಳು ಮತ್ತು ಇತರ ಸಿಬ್ಬಂದಿ ವರ್ಗದವರಿಗೆ ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿವೈ ರಾಘವೇಂದ್ರ ಅವರಿಂದ ಅಭಿನಂದನೆ ಹಾಗೂ ಉಡಿ ತುಂಬುವ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ,
ಶಾಸಕರುಗಳಾದ ಶ್ರೀ ಆಯನೂರು ಮಂಜುನಾಥ ,ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶ್ರೀ ಅಶೋಕ್ ನಾಯ್ಕ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಂ.ಬಿ ಬಾನು ಪ್ರಕಾಶ, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ .ಎಸ್. ಅರುಣ್ ಕುಮಾರ್ ,ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ,ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಟಿ. ಡಿ . ಮೇಘರಾಜ್,ಪದ್ಮನಾಭ ಭಟ್ ,ಆರ್ ಎಸ್.ಎಸ್ ದಕ್ಷಿಣ ಪ್ರಾಂತ ಸಹ ಕಾರ್ಯವಾಹಕ ಶ್ರೀ ಪಟ್ಟಾಭಿರಾಮ , ಮಹಾ ಪಾಲಿಕೆ ಮೇಯರ್ ಶ್ರೀಮತಿ ಸುವರ್ಣ ಶಂಕರ್ ಹಾಗೂ ಉಪಮೇಯರ್ ಸುರೇಖಾ ಮುರಳೀಧರ್ , ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ರತ್ನಾಕರ್ ಶೆಣೈ,ಪಾಲಿಕೆ ಸದಸ್ಯರಾದ ಎಸ್ .ಚನ್ನಬಸಪ್ಪ ,ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಇ. ಕಾಂತೇಶ್ , ಮಾನ್ಯ ಜಿಲ್ಲಾಧಿಕಾರಿಗಳು ,ಪೊಲೀಸ್ ವರಿಷ್ಠಾಧಿಕಾರಿಗಳು ಅಧಿಕಾರಿಗಳು* ,ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕರೋನಾ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ನರ್ಸ್ ಅಪಾರ ಸಂಖ್ಯೆಯಲ್ಲಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.
By Goutham K S, Sagara