ಇಂದು (22-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ KFD ಗೆ ಕೈಗೊಂಡ ಕ್ರಮಗಳ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ, KFD ಚಿಕಿತ್ಸೆ ಪಡೆಯುತ್ತಿರುವ ಸೀತಾಳಬಾಳು ಗ್ರಾಮದ ಶ್ರೀಮತಿ ಲಕ್ಷ್ಮಿ w/o ನಾರಾಯಣಪ್ಪ ನವರ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು. ನಂತರ
ಕರ್ತವ್ಯದಲ್ಲಿ ನಿರತರಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಮಂಗನ ಕಾಯಿಲೆ ಹರಡದಂತೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿ, ಸತ್ತ ಮಂಗಗಳನ್ನು ಶೀಘ್ರದಲ್ಲಿ ಸುಟ್ಟು ಹಾಕುವಂತೆ, ಆರೋಗ್ಯ ಇಲಾಖೆ ಮತ್ತು ಗ್ರಾ.ಪಂ ಜೊತೆಗೆ ಹೊಂದಾಣಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾ.ಬಿಜೆಪಿ ಅಧ್ಯಕ್ಷರಾದ ಲೋಕನಾಥ್ ಬಿಳಿಸಿರಿ, ಬಿ.ಟಿ.ರವೀಂದ್ರ, ಮತ್ತಿತರರು ಉಪಸ್ಥಿತರಿದ್ದರು.

By Goutham K S, Sagara
