ಇಂದು (03-05-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ (ಕೋವಿಡ್-19) ನೀಡಿದ 2 ಲಕ್ಷ ರೂ ಗಳ ಚೆಕ್ ಸ್ವೀಕರಿಸಿ.
ದೇವಸ್ಥಾನದ ವತಿಯಿಂದ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬ್ಯಾಕೊಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ “ಆಶಾ ಕಾರ್ಯಕರ್ತೆಯರಿಗೆ, ದಾದಿಯರಿಗೆ, ಅಂಗನವಾಡಿ ಸಹಾಯಕಿಯರಿಗೆ ಆಹಾರದ ಕಿಟ್” ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಧರ್ಮದರ್ಶಿಗಳಾದ ಡಾ.ರಾಮಪ್ಪ ನವರು, ಪ್ರದಾನ ಅರ್ಚಕರಾದ ಶೇಷಗಿರಿ ಭಟ್ಟರು, ಪ್ರಸನ್ನ ಕೆರೆಕೈ, ನಾಗರಾಜ್ ಬೊಬ್ಬಿಗೆ, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
