ಮೂಲ: ಕನ್ನಿಗಂಡ ಬಿ ಪೊನ್ನಪ್ಪ, ಕೊಡಗು
ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಕೊಡಗು ಇಂಡೇನ್ ಸರ್ವಿಸಸ್ ವತಿಯಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೦ ಮಂದಿ ಫಲಾನುಭವಿಗಳಿಗೆ ಉಚಿತವಾಗಿ ಅಡುಗೆ ಅನಿಲದ ಸಿಲಿಂಡರ್, ಗ್ಯಾಸ್ ಸ್ಟೌವ್ ಅನ್ನು ವಿತರಿಸಲಾಯಿತು.
ಕೊಡಗು ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷರಾದ ಬಿ.ಬಿ. ಭಾರತೀಶ್ ಅವರು ಗ್ಯಾಸ್ ಸ್ಟೌವ್ ಹಾಗೂ ಸಿಲಿಂಡರ್ ಅನ್ನು ವಿತರಿಸಿ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ, ಅಡುಗೆ ಅನಿಲ ಸಂಪರ್ಕವಿಲ್ಲದ ಕಡುಬಡವರಿಗೆ ಉಜ್ವಲ ಯೋಜನೆಯಡಿಯಲ್ಲಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕದ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿದರು.
ಈ ಸಂದರ್ಭದಲ್ಲಿ ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ಸದಸ್ಯರಾದ ಅಂಚೆಮನೆ ಸುಧಿ ಹಾಗೂ ಕೊಡಗು ಇಂಡೇನ್ ಸರ್ವಿಸಸ್ ನ ಸಿಬ್ಬಂದಿ ಸದಸ್ಯರು ಉಪಸ್ಥಿತರಿದ್ದರು.
