ಕನ್ನಡ

ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ಕಂಪ್ಲೇಂಟ್

indsamachar

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಹಿರಿಯ ನಟ ಪ್ರಕಾಶ ರಾಜ್ ಅವರು ದೇಶದ್ಯಾಂತ ಮೂರು ಕಡೆ ಮತದಾರ ಪಟ್ಟಿಯಲ್ಲಿ ಹೆಸರು ಹೊಂದಿರುವುದರಿಂದ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಬೆಂಗಳೂರಿನ ಗಿರೀಶ್‍ ಕುಮಾರ್ ನಾಯಕ ಅವರು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮತ್ತು ಬೆಂಗಳೂರು ನಗರ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದು, ಪ್ರಕಾಶರಾಜ್ ಅವರು ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದಾರೆ.

ಅದೇ ರೀತಿ ತಮಿಳುನಾಡಿನ ವೆಲ್ಲಾನಾಚರಿ ಕ್ಷೇತ್ರದಲ್ಲಿ ಎರಡು ಕಡೆ ತೆಲಂಗಾಣದ ಸೆರಿಲಿಂಗಂಪಲ್ಲಿ ಕ್ಷೇತ್ರದಲ್ಲಿ ಸೇರಿ ಒಟ್ಟು ೪ ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದಾರೆ.

ಜನಪತ್ರಿನಿಧಿಗಳ ಕಾಯ್ದೆ ಸೆಕ್ಷನ್ ೧೭, ೧೮ ಮತ್ತು ೩೧ರ ಅನ್ವಯ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದುವಂತಿಲ್ಲ. ಹೀಗಾಗಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರಕಾಶ ರಾಜ್ ನಾಮಪತ್ರ ತಿರಸ್ಕರಿಸಬೇಕೆಂದು ದೂರು ನೀಡಿರುವುದಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your e-mail address will not be published. Required fields are marked *

20 − thirteen =

To Top
WhatsApp WhatsApp us