ಕನ್ನಡ

ಗಡಿಯಲ್ಲಿ ನಿಲ್ಲದ ಪಾಕ್ ಪುಂಡಾಟ, ಶೆಲ್ ದಾಳಿಯಲ್ಲಿ ಗ್ರಾಮಸ್ಥರಿಗೆ ಗಾಯ

INDSAMACHAR

ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರೇರಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಿಂದಾಗಿ ಕೆಲವು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಾಕಿಸ್ತಾನ ಸೈನಿಕರು ನಡೆಸಿದ ಮಾರ್ಟರ್ ಶೆಲ್ ದಾಳಿಯಿಂದಾಗಿ ಮ್ಯಾನ್ ಕೊಟ್ ಸೆಕ್ಟರ್‌ನಲ್ಲಿನ ನಾರಾಲಾ ಗ್ರಾಮದ ಮೊಹಮ್ಮದ್ ಮುಸ್ತಕ್ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ. ಅವರ ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮ್ಯಾನ್ ಕೋಟ್ ಹಾಗೂ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ರೇಂಜರ್‌ಗಳು ಕದನ ವಿರಾಮ ಉಲ್ಲಂಘಿಸಿ ಉದ್ದೇಶಪೂರ್ವಕವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಭಾರತೀಯ ಯೋಧರು ಕೂಡಾ ಪ್ರತಿ ದಾಳಿ ನಡೆಸಿದ್ದು, ಸೂಕ್ತ ಪ್ರತ್ಯುತ್ತರ ನೀಡಿದ್ದಾರೆ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.

Click to comment

Leave a Reply

Your e-mail address will not be published. Required fields are marked *

9 + 20 =

To Top
WhatsApp WhatsApp us