ಕೆಲ ವರ್ಷಗಳ ಹಿಂದೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರೀಯ ವಿದೇಶ ವ್ಯವಹಾರ ಖಾತೆ ಸಚಿವ ಹಾಗೂ ಹಿರಿಯ ರಾಜಕಾರಣಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು ಕಾಂಗ್ರೆಸ್ ಪಕ್ಷದೊಂದಿಗಿನ ದಶಕಗಳ ಸಂಬಂಧಕ್ಕೆ ಅಂತ್ಯ ಹಾಡಿ, ಭಾರತೀಯ ಜನತಾ ಪಕ್ಷಕ್ಕೆ ಸೇರಿದರು.
ಈಗ, ಅವರ ಮೊಮ್ಮಗ ಡಾ. ನಿರಂತರ ಗಣೇಶ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವೈದ್ಯರ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಡಾ. ನಿರಂತರ ಗಣೇಶ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಹತ್ತಿರದವರಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಗಳಲ್ಲಿ ಡಾ. ಗಣೇಶ್ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದು, ಟಿಕೆಟ್‌ಗಾಗಿ ಬೇಡಿಕೆಯಿಟ್ಟಿದ್ದರು.
ಕೆಪಿಸಿಸಿಯಲ್ಲಿನ ಹುದ್ದೆಯ ಸ್ಥಾನಕ್ಕೆ ಡಾ. ಗಣೇಶ್ ರಾಜೀನಾಮೆ ನೀಡಿರುವ ಹಿಂದಿನ ಕಾರಣಗಳನ್ನು ಜನರು ಊಹಿಸಲಾರಂಭಿಸುವುದು ಖಚಿತ.
ಕೆಲ ದಿನಗಳ ಹಿಂದೆ ಎಸ್ ಎಂ ಕೃಷ್ಣ, ತಾವು ಕಾಂಗ್ರೆಸ್ ತೊರೆಯಲು ಅಧ್ಯಕ್ಷ ರಾಹುಲ್ ಕಾರಣ ಎಂಬ ಹೇಳಿಕೆ ನೀಡಿದ್ದನ್ನು ಸ್ಮರಿಸಬಹುದು.
